NationalFeatured StoryPolitics

ಉಮರ್ ಖಾಲಿದ್ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಂದೂಡಿಕೆ

ಹೊಸದಿಲ್ಲಿ: 2020ರ ದೆಹಲಿ ಹಿಂಸಾಚಾರದ ಹಿಂದಿನ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಬಂಧಿಸಿ ಆರೋಪಿಯಾಗಿರುವ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಮುಂದೂಡಿದೆ.

ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ಬೇಲಾ ಎಂ.ತ್ರಿವೇದಿ ಅವರ ಪೀಠ, ಅರ್ಜಿದಾರರ ಪರ ವಕೀಲರು ಒಂದು ವಾರ ಕಾಲಾವಕಾಶ ಕೋರಿ ಪತ್ರ ರವಾನಿಸಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಿದರು.

ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ ಈ ವಿಷಯವನ್ನು ಆಗಸ್ಟ್ 9 ರಂದು ಪಟ್ಟಿ ಮಾಡುವ ಸಾಧ್ಯತೆಯಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button