Featured StoryUdupi

ಉಡುಪಿ: ಖಾಸಗಿ ಕಾಲೇಜಿನ ಟಾಯ್ಲೆಟ್ ನಲ್ಲಿ ವಿಡಿಯೋ ಮಾಡಿದ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಾಸಕ ಯಶ್ಫಾಲ್ ಸುವರ್ಣ ಆಗ್ರಹ

ಉಡುಪಿ: ಖಾಸಗಿ ಕಾಲೇಜಿನ ಟಾಯ್ಲೆಟ್ ನಲ್ಲಿ ವಿಡಿಯೋ ಮಾಡಿದ ವಿಚಾರದ ಕುರಿತು ಶಾಸಕ ಯಶ್ಫಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದು, ಪ್ರಕರಣ ನಡೆದಾಗ ನಾನು ಅಧಿವೇಶನದಲ್ಲಿದ್ದೆ. ತಪ್ಪಿತಸ್ಥ ವಿದ್ಯಾರ್ಥಿನಿಯರ ವಿರುದ್ದದ ಕ್ರಮ ಜರುಗಿಸಬೇಕು ಎಂದರು.

ಉಡುಪಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಜಿಲ್ಲೆ. ಮಹಿಳೆಯರಿಗೆ ಗೌರವ ಕೊಡುವ ಜಿಲ್ಲೆ ಉಡುಪಿ ಜಿಲ್ಲೆಯಲ್ಲಿ ಈ ಮೂರು ಹುಡುಗಿಯರ ವರ್ತನೆಯಿಂದ ತಲೆತಗ್ಗಿಸುವಂತಾಗಿದೆ. ಇದರಿಂದ ಜಿಲ್ಲೆಯ ಜನತೆಗೆ ಅಪಮಾನವಾಗಿದೆ ಎಂದರು.

ಈ ರೀತಿಯ ಹುಡುಗಾಟಿಕೆ ಮಾಡುವುದು ಸರಿಯಲ್ಲ.ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ.ಈ ಘಟನೆಯ ಬಗ್ಗೆ ನನಗೆ ಸಂಶಯ ಇದೆ. ಟಾಯ್ಲೆಟ್ ನಲ್ಲಿ ವಿಡಿಯೋ ಕ್ಯಾಮೆರಾ ಇಟ್ಟಿರುವುದು ಸರಿಯಲ್ಲ.ಇದರಲ್ಲಿ ಬ್ಲಾಕ್ ಫೈಲ್ ಮಾಡುವ ಷಡ್ಯಂತ್ರ ಇರಬಹುದು. ಮೂರು ಯುವತಿಯರ ಬಗ್ಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿಗಳ ಗಮನಕ್ಕೂ ತರುತ್ತೇವೆ. ಸಂಘಟನೆಯಲ್ಲಿ ಕೆಲಸ ಮಾಡುವವರನ್ನು ಗಡಿ ಪಾರು ಮಾಡುತ್ತಾರೆ. ಮೊಬೈಲ್ ದಾಖಲೆ ಕಲೆ ಹಾಕಿ ಸೂಕ್ತ ಕ್ರಮ ಜರುಗಿಸಿ. ಮತ್ತಷ್ಟು ಮಾಹಿತಿ ಕಲೆ ಹಾಕಿ, ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ.‌ಉಡುಪಿ ಜಿಲ್ಲೆಯ ಪೊಲೀಸ್ ಇಲಾಖೆ ಮೇಲೆ ವಿಶ್ವಾಸ ಇದೆ.ವಿಳಂಬ ಮಾಡಿದರೆ ನ್ಯಾಯಕ್ಕಾಗಿ ಹೋರಾಡುತ್ತೇವೆ. ಮುಸ್ಲಿಂ ವಿದ್ಯಾರ್ಥಿನಿಯರ ನಡೆ ಸಂಶಯ ಹುಟ್ಟಿಸುತ್ತಿದೆ. ಈ ಪ್ರಕರಣದಲ್ಲಿ ಜಿಹಾದಿ ಸಂಘಟನೆಗಳ ಕೈವಾಡ ಸಂಶಯ ಇದೆ ಎಂದ ಅವರು ಕಾಲೇಜಿಗೆ ಭೇಟಿ ನೀಡಿ ಮಾತನಾಡುತ್ತೇನೆ. ವಿಡಿಯೋ ಕ್ಲಿಪಿಂಗ್ ಇದಿಯೋ ಇಲ್ಲವೋ ಗೊತ್ತಿಲ್ಲ ಆದರೆ ಸೂಕ್ತ ಕ್ರಮ ಜರುಗಿಸಬೇಕು ಎಂದರು.

ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದ ರಶ್ಮಿ ಸಾಮಂತ್ ಪೊಲೀಸರಿಂದ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪೊಲೀಸರು ಮನೆಗೆ ಹೋಗಿ ವಿಚಾರಣೆ ಮಾಡಿದ್ದಾರೆ.ರಾಷ್ಟ್ರೀಯ ಚಿಂತನೆಯವರಿಗೆ ಕಿರುಕುಳ ನೀಡಿದರೆ ಸಹಿಸಲು ಸಾಧ್ಯವಿಲ್ಲ.ರಶ್ಮಿ ಸಾಮಂತ್ ಮನೆಯವರನ್ನು ಭೇಟಿ ಮಾಡಿ ಈ ಕುರಿತು ಮಾತನಾಡುತ್ತೇನೆ.ಗೃಹ ಮಂತ್ರಿಗಳಿಗೆ ಎಚ್ಚರಿಕೆ ಮತ್ತು ಮನವಿ ಮಾಡುತ್ತೇವೆ.ಇಂತಹಾ ಪ್ರಕರಣಗಳಿಂದ ಶಿಕ್ಷಣ ಸಂಸ್ಥೆಗಳಿಗೆ ಹೊಡೆತ ಬೀಳುತ್ತೆ. ಪೊಲೀಸ್ ಇಲಾಖೆ ಸುಮೊಟೊ ಕೆ ಸು ದಾಖಲಿಸಬೇಕು ಎಂದು ಆಗ್ರಹಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button