Crime

ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ

ನವದೆಹಲಿ,ಜ.26:- ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ ಹಿಂಸಾಚಾರಕ್ಕೆ ತಿರುಗಿದೆ. ಹಿಂದೆ ಪ್ರಕಟಿಸಿದಂತೆ ರೈತರು ಟ್ರ್ಯಾಕ್ಟರ್ ರ್ಯಾಲಿ ನಡೆಸುತ್ತಿದ್ದಾರೆ. ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ನಂತರವೂ ಪ್ರತಿಭಟನಾಕಾರರನ್ನು ನಿಯಂತ್ರಿಸಲಾಗುತ್ತಿಲ್ಲ. ಕೆಲವೆಡೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಘಟನೆಗಳೂ ನಡೆದಿವೆ.
ನವದೆಹಲಿಯ ಗಾಜಿಪುರ ಗಡಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ತೆರಳಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗ ಮಾಡಲಾಗಿದೆ. ಲಾಠಿಚಾರ್ಜ್ ಮಾಡಲಾಗಿದೆ. ಕೆಲವೆಡೆ ಪೊಲೀಸರ ಬ್ಯಾರಿಕೇಡ್ ತಳ್ಳಿ ನುಗ್ಗಲು ಯತ್ನಿಸಿದ ಘಟನೆಗಳೂ ನಡೆದಿವೆ.
ಅಕ್ಷರಧಾಮ ಬಳಿ ರೈತರ ಮೇಲೆ ಜಲಫಿರಂಗಿ ಪ್ರಯೋಗ ಮಾಡಲಾಗುತ್ತಿದೆ. ಪೆÇಲೀಸರ ಈ ನಡೆಯಿಂದ ಕೆರಳಿತದ ಅನ್ನದಾತರು ಪೆÇಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ ಹಲವು ಪೆÇಲೀಸರಿಗೆ ಗಂಭೀರ ಗಾಯಗಳಾಗಿವೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button