Featured StoryDakshina Kannada

ದ.ಕ | ಆಟೋ ಚಾಲಕನ ಮೇಲೆ ಹಲ್ಲೆ – ಪ್ರಕರಣ ದಾಖಲು

ಬೆಳ್ತಂಗಡಿ: ಮತ್ತೆ ನೈತಿಕ ಪೊಲೀಸ್’ಗಿರಿ ಘಟನೆಯೊಂದು ವರದಿಯಾಗಿದ್ದು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ. ಇದೀಗ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ.

ಉಜಿರ ಹಳೆ ಪೇಟೆ ನಿವಾಸಿ ಮುಹಮ್ಮದ್ ಆಶಿಕ್ ಹಲ್ಲೆಗೊಳಗಾದ ಯುವಕ. ಆಶಿಕ್ ತನ್ನ ಆಟೋದಲ್ಲಿ ಬುಧವಾರ ರಾತ್ರಿ ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆ ಹೋಗಿ ಹಿಂದಿರುಗುತ್ತಿದ್ದ ವೇಳೆ ಈ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ನಾಲ್ವರ ತಂಡವೊಂದು ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪವೇ ರಿಕ್ಷಾವನ್ನು ತಡೆದು ಆಶಿಕ್ ಮೇಳೆ ಯದ್ವಾತದ್ವಾ ಹಲ್ಲೆ ಗೈದಿದೆ. ಮಾರಣಾಂತಿಕ ಹಲ್ಲೆಗೊಳಗಾದ ಮುಹಮ್ಮದ್ ಆಶಿಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button