Featured StoryState News

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎಂದ ಕೇಂದ್ರ ಸರ್ಕಾರ: ಡಿಕೆ ಶಿವಕುಮಾರ್​ ಆರೋಪ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು 2023-24ನೇ ಸಾಲಿನ ಬಜೆಟ್​​ನಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 5,300 ಕೋಟಿ ರೂ. ಅನುದಾನ ಮೀಸಲಿಟ್ಟಿತ್ತು. ಆದರೆ ಇದೀಗ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎನ್ನುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಯೋಜನೆ ಸಂಬಂಧ ಜಲಸಂಪನ್ಮೂಲ ಇಲಾಖೆಯಲ್ಲಿ 600 ಕೋಟಿ ರೂ. ಮಾತ್ರ ಇದೆ. ಆದರೆ 1 ಕೋಟಿ 25 ಲಕ್ಷ ರೂ. ಕೆಲಸ ಮಂಜೂರು ಆಗಿದೆ ಎಂದು ತಿಳಿಸಿದರು.

ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರವಾಗಿ ಮಾತನಾಡಿದ ಅವರು ಆರೋಪದ ಬಗ್ಗೆ ತನಿಖೆ ಮಾಡಿಸೋಣ. ನನ್ನ ವಿರುದ್ಧ ತನಿಖೆ ಮಾಡಿಸಬೇಕೆಂದು ಡಾ.ಅಶ್ವತ್ಥ್ ಹೇಳಿದ್ದರು. ಮುನಿರತ್ನ ವಿರುದ್ಧದ ಆರೋಪ ಬಗ್ಗೆ ತನಿಖೆ ಮಾಡಿಸಿ ಎಂದಿದ್ದರು.

ಬಿಬಿಎಂಪಿ ಕಾಮಗಾರಿಗಳ ಬಗ್ಗೆಯೂ ತನಿಖೆ ಮಾಡಿಸುತ್ತೇವೆ. ಬಿಬಿಎಂಪಿಯಲ್ಲಿ ಟೆಂಡರ್ ಆಗದಿದ್ದರೂ ಕಾಮಗಾರಿ ನಡೆಸಿದ್ದಾರೆ. ಹೀಗಾಗಿ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಬಿಎಂಪಿಯಲ್ಲಿ ಕೆಲಸ ಯಾರು ಕೊಟ್ಟರು ಗೊತ್ತಿಲ್ಲ. ಟೆಂಡರ್ ಆಗಿಲ್ಲ ಆದರೂ ಕಾಮಗಾರಿ ಮಾಡಿದ್ದಾರೆ. 25 ದಿನಕ್ಕೆ, 15 ದಿನಕ್ಕೆ ಬಿಲ್ ಆಗಿಬಿಡತ್ತಾ? 15 ದಿನಕ್ಕೆ ಇಲ್ಲಿ ಕೆಲಸ ಆಗಿಬಿಡತ್ತಾ? ಅದಕ್ಕಾಗಿಯೇ ಪರಿಶೀಲನೆಗೆ ಅಧಿಕಾರಿಗಳನ್ನು ಕೇಳಿದ್ದೇನೆ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button