Crime

ಪವರ್ ಟಿವಿ ಸಂಸ್ಥೆಯ ಮೇಲೆ ಪೊಲೀಸರ ದಾಳಿ: ಖಂಡನೆ

ಮಡಿಕೇರಿ,ಸೆ,29:- ಬೆಂಗಳೂರಿನ ಪವರ್ ಟಿ.ವಿ. ಸಂಸ್ಥೆಯ ಮೇಲೆ ಪೊಲೀಸರು ದಾಳಿ ಮಾಡಿರುವ ಕ್ರಮವನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್ ತೀವ್ರವಾಗಿ ಖಂಡಿಸಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಹರಣ ಮಾಡುವ ಈ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಟ್ರಸ್ಟ್ ಈ ಬಗ್ಗೆ ಸಮಗ್ರವಾದ ತನಿಖೆಯಾಗಬೇಕು ಮತ್ತು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ.

ಶೋಕ ಸಂತಾಪ: ಇತೀಚೆಗೆ ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಸಂಗೀತ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ, ಕೊಡಗು ಜಿಲ್ಲೆಯ ಪತ್ರಕರ್ತರಾಗಿದ್ದ ಎಂ.ಕೆ. ನಜೀರ್ ಹಾಗೂ ಎಂ.ಎ ಉಸ್ಮಾನ್‍ರವರ ನಿಧನಕ್ಕೆ ಕೊಡಗು ಪತ್ರಿಕಾ ಭವನ ಟ್ರಸ್ಟ್ ಅತೀವವಾದ ಸಂತಾಪ ವ್ಯಕ್ತಪಡಿಸಿದೆ ಹಾಗೂ ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ದೊರಕಲೆಂದು ಪ್ರಾರ್ಥಿಸುತ್ತೇವೆ ಎಂದು ಕೊಡಗು ಪತ್ರಿಕಾ ಭವನ ಟ್ರಸ್ಟ್ ತಿಳಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button