ಅ.1ರಂದು ವಿಶ್ವ ಹಿರಿಯ ನಾಗರೀಕರ ದಿನಾಚರಣೆ
ರಾಯಚೂರು,ಸೆ.29:- ವಿಶ್ವ ಹಿರಿಯ ನಾಗರೀಕರ ದಿನಾಚರಣೆಯನ್ನು ಮುಂಬರುವ ಅಕ್ಟೋಬರ್ 1ರ ಗುರುವಾರ ನಗರದ ಕನ್ನಡ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ.
ರಾಜ್ಯದ ಉಪ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ರಾಯಚೂರು ನಗರ ಶಾಸಕರು ಹಾಗೂ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಶಿವರಾಜ್ ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಆದಿಮನಿ ವೀರಲಕ್ಷ್ಮೀ, ಸಂಸದರಾದ ರಾಜಾ ಅಮರೇಶ್ವರ ನಾಯಕ ಹಾಗೂ ಸಂಗಣ್ಣ ಕರಡಿ, ದೇವದುರ್ಗ ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ಶಿವನಗೌಡ ನಾಯಕ, ಮಾನವಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಸಿಂಧನೂರು ಶಾಸಕರಾದ ವೆಂಕಟರಾವ್ ನಾಡಗೌಡ, ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್, ಲಿಂಗಸೂಗೂರು ಶಾಸಕರಾದ ಡಿ.ಎಸ್. ಹೂಲಗೇರಿ, ಕಾಡಾ ಅಧ್ಯಕ್ಷರಾದ ಬಸನಗೌಡ ತುರ್ವಿಹಾಳ್, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ್ ಪಾಟೀಲ್, ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಹನುಮಗೌಡ ಬೆಳಗುರ್ಕಿ, ರಾಯಚೂರು ಎಪಿಎಂಸಿ ಅಧ್ಯಕ್ಷರಾದ ರಾಮನಗೌಡ ಕರಡಿಗುಡ್ಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ.ಗೋಪಾಲ ರೆಡ್ಡಿ ಹಾಗೂ ಇತರೇ ಗಣ್ಯರು ಭಾಗವಹಿಸುವರು.




