Crime
ಇಂದು ಒಂದು ದಿನದ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ
ರಾಯಚೂರು,ಸೆ.29:- ಇಲ್ಲಿನ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸಿಬ್ಬಂದಿಗಳ ಮಕ್ಕಳಿಗೆ ಶೈಕ್ಷಣಿಕ ಕ್ಷೇತ್ರದ ಆಯ್ಕೆ, ಸ್ಪೂರ್ತಿ, ಪ್ರೇರಣೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಒಂದು ದಿನದ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸೆ.30ರ ಬುಧವಾರ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಬೆಳಿಗ್ಗೆ 10ಕ್ಕೆ ಹಮ್ಮಿಕೊಳ್ಳಲಾಗಿದೆ.
ಕಲಬುರಗಿಯ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಡಾ.ಮನೋಹರ ವೈ.ಪತ್ತಾರ, ಚಾಲುಕ್ಯ ಕರಿಯರ್ ಅಕಾಡೆಮಿ ನಿರ್ದೇಶಕ ಸಂಗಮೇಶ ಮಂಗನವರ್ ಅವರು ಭಾಗವಹಿಸಲಿದ್ದಾರೆಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




