Crime
ಎಸ್.ಎಸ್.ಎಲ್.ಸಿ ಪರೀಕ್ಷೆ : 904 ವಿದ್ಯಾರ್ಥಿಗಳು ಗೈರು
ರಾಯಚೂರು,ಸೆ.29:- ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಸೆ.29ರ ಮಂಗಳವಾರ ವಿಜ್ಞಾನ ವಿಷಯದ ಪರೀಕ್ಷೆ ನಡೆಯಿತು.
ಜಿಲ್ಲೆಯ ಒಟ್ಟು 33 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ವಿಜ್ಞಾನ ವಿಷಯದ ಪರೀಕ್ಷೆ ಬರೆಯಲು 7,255 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 6,351 ವಿದ್ಯಾರ್ಥಿಗಳು ಹಾಜರಾಗಿ 904 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಯಾವುದೇ ಡಿಬಾರ್, ಪರೀಕ್ಷಾ ಕೇಂದ್ರದಿಂದ ಹೊರ ಹಾಕಿದ ಮತ್ತು ನಕಲಿ ವಿದ್ಯಾರ್ಥಿಗಳ ಪ್ರಕರಣ ವರದಿಯಾಗಿಲ್ಲವೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




