Featured StoryTumakuru

ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್​’ಗೆ ಮತ್ತೋರ್ವ ಮಾಜಿ ಶಾಸಕ ರಾಜೀನಾಮೆ

ತುಮಕೂರು, (ಸೆಪ್ಟೆಂಬರ್ 27): ಜೆಡಿಎಸ್​, ಬಿಜೆಪಿಯೊಂದಿಗೆ ಮೈತ್ರಿ (JDS And BJP Alliance) ಮಾಡಿಕೊಂಡಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ (Loksabha Elections 2024) ಜಂಟಿಯಾಗಿ ಅಖಾಡಕ್ಕಿಳಿಯಲಿವೆ. ಆದ್ರೆ, ಅದಕ್ಕೂ ಮುನ್ನ ಜೆಡಿಎಸ್​ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ. ಇದೀಗ ತುಮಕೂರಿನಲ್ಲಿ‌ (Tumakuru) ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮುಖಂಡ ಹಾಗೂ ಮಾಜಿ ಶಾಸಕ ಶಫಿ ಅಹಮದ್(shafi ahmed) ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ.

ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಶಫೀ ಅಹಮದ್ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಜಿಲ್ಲಾ ಅಧ್ಯಕ್ಷರಿಗೆ ರವಾನಿಸಿದ್ದಾರೆ. ಅಲ್ಲದೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ದೇವೇಗೌಡ ಅವರಿಗೆ ವಾಟ್ಸಪ್ ಮಾಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button