Bengaluru UrbanFeatured Story

ಕಾವೇರಿ ವಿವಾದ: ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಖ್ಯಾತ ನಟ ನೆನಪಿರಲಿ ಪ್ರೇಮ್

ಬೆಂಗಳೂರು:ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಿದ್ದು ಇಡೀ ಬೆಂಗಳೂರಿನ ಜನ ನೀರಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ಕೂಡ ಕನ್ನಡ ಪರ ಸಂಘಟ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಸ್ಯಾಂಡಲ್ ವುಡ್ ನಟ ನೆನಪಿರಲಿ ಪ್ರೇಮ್ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ವಿಷಯ ವಾಗಿ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬೆಂಗಳೂರು ಬಂದ್,ಕರ್ನಾಟಕ ಬಂದ್ ಗೆ ಕರೆ ನೀಡಲಾಗಿತ್ತು. ಕನ್ನಡ ಚಿತ್ರರಂಗವೇ ಹೋರಾಟಕ್ಕೆ ಸಾಥ್ ನೀಡಿದ್ದು ನಟ-ನಟಿಯರು ಪ್ರತಿಭಟನೆ ನಡೆಸುತ್ತಿದ್ದಾರೆ.ಈ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲುಆರ್ ಸಿ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ತಮಿಳುನಾಡಿಗೆ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿರುವ ಪ್ರೇಮ್, ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಕಾವೇರಿ ನಮ್ಮದು. ಈ ವಿಚಾರವಾಗಿ ಕನ್ನಡಿಗರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button