
Featured StoryBengaluru Urban
ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಮೃತ್ಯು
ಬೆಂಗಳೂರು: ಕನ್ನಡ ಚಿತ್ರರಂಗದ ನಟ ನಾಗಭೂಷಣ ಅವರಿದ್ದ ಕಾರು ನಿನ್ನೆ ರಾತ್ರಿ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ವಸಂತನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಕೃಷ್ಣ ಅವರ ಪತ್ನಿ ಪ್ರೇಮಾ (48) ಅವರು ಅವರ ಪತಿಯ ಜೊತೆ ವಾಕಿಂಗ್ ಮಾಡುವಾಗ ನಟ ನಾಗಭೂಷಣ ಅವರಿದ್ದ ಕಾರು ಡಿಕ್ಕಿಯಾಗಿದೆ.ಮೊದಲು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ನಂತರ ಫುಟ್ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೃಷ್ಣ ಅವರು ಗಂಭೀರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಬಗ್ಗೆ ಕೆ.ಎಸ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




