Crime

ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆ

ಬೀದರ್,ಸೆ.30:- ಜಿಲ್ಲೆಯಲ್ಲಿ ಅಕ್ಟೋಬರ್ 4 ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರ ಅಧ್ಯಕ್ಷತೆಯಲ್ಲಿ ಸೆ.30ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಕೋವಿಡ್-19 ಸಂದರ್ಭದಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯಿಂದ ಪರೀಕ್ಷೆಗಳು ನಡೆಯುವ ವ್ಯವಸ್ಥೆ ಮಾಡಬೇಕು. ಯಾವುದೇ ರೀತಿಯ ಅವ್ಯವಹಾರಕ್ಕೆ ಅವಕಾಶವಿಲ್ಲದ ಹಾಗೆ ಪರೀಕ್ಷೆಗಳು ಪಾರದರ್ಶಕತೆಯಿಂದ ನಡೆಯುವಂತೆ ನೋಡಿಕೊಳ್ಳಲು ಇದೆ ವೇಳೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಶಿಕ್ಷಕರ ಅರ್ಹತಾ ಪರೀಕ್ಷೆಯು ಅಕ್ಟೋಬರ್ 4ರಂದು ಬೀದರ ಜಿಲ್ಲೆಯ 25 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರಿ ಉಪ ನಿರ್ದೇಶಕರಾದ ಇನಾಯತ್ ಅಲಿ ಶಿಂಧೆ ಅವರು ಸಭೆಗೆ ಮಾಹಿತಿ ನೀಡಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಜೇಶನ್ ವ್ಯವಸ್ಥೆ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ರೀಕ್ಷಾ ಕೇಂದ್ರದಲ್ಲಿ ತಪಾಸಣೆ ನಡೆಸುವ ವೇಳೆ ಯಾರಿಗಾದರು ಕೋವಿಡ್-19 ಲಕ್ಷಣಗಳು ಕಂಡು ಬಂದರೆ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಮತ್ತು ಸಂಬಂಧಿಸಿದ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ 25 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಸ್ಥಳೀಯ ಜಾಗೃತ ದಳದವರು ಮತ್ತು ಮಾರ್ಗಾಧಿಕಾರಿಗಳು ಇದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button