Udupi

ಹೆಬ್ರಿ: ಕಾರು ಢಿಕ್ಕಿ – ಚಿರತೆ ಮೃತ್ಯು

ಹೆಬ್ರಿ: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಚಿರತೆಯೊಂದು ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ.

ಕಾರ್ಕಳದಿಂದ ಮುದ್ರಾಡಿ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆಗೆ ಏಕಾಏಕಿ ಬಂದ ಚಿರತೆಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಚಿರತೆ ಸ್ಥಳದಲ್ಲೇ ಮೃತಪಟ್ಟಿತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಹೆಬ್ರಿ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button