
Bengaluru UrbanFeatured Story
ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ; ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ದುರ್ಮರಣ
ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಫುಡ್ ಡೆಲಿವರಿ ಬಾಯ್ ರಮೇಶ್ ನಾಯ್ಕ್ (37) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಮೇಶ್ ಗ್ರಾಹಕರಿಗೆ ಊಟ ತೆಗೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಲಾರಿಯ ಹೊಡೆತಕ್ಕೆ ರಮೇಶ್ ನಾಯ್ಕ್ ಸ್ಥಳದಲ್ಲೇ ಮೃತಪಾಟ್ಟಿದ್ದಾರೆ.
ಲಾರಿ ಚಾಲಕನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




