Chitradurga

ಪ್ರೀತಿ ನಿರಾಕರಿಸಿದಕ್ಕೆ ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಯುವಕ

ಚಿತ್ರದುರ್ಗ:ಯುವತಿ ಪ್ರೀತಿ ನಿರಾಕರಿಸಿದಕ್ಕೆ ಯುವಕನೊಬ್ಬ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ನಡೆದಿದೆ.ಮೃತ ಪಟ್ಟ ಯುವತಿಯನ್ನು ಹುಲ್ಲೂರು ಗ್ರಾಮದ ಅರ್ಪಿತಾ (19)ಎಂದು ಗುರುತಿಸಲಾಗಿದೆ.

ಅಕ್ಟೋಬರ್ 3 ರಂದು ಯುವತಿ ಮೇಲೆ ಆರೋಪಿ ಅಜೇಯ್ ಹಲ್ಲೆ ಮಾಡಿದ್ದನಂತೆ.ಗಂಭೀರವಾಗಿ ಗಾಯಗೊಂಡಿದ್ದ ಯುವತಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಅರ್ಪಿತಾ ಸಾವನ್ನಪ್ಪಿದ್ದಾರೆ.

ಹುಲ್ಲೂರು ಗ್ರಾಮದ ಚಾಲಕ ಅಜೇಯ್ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದ್ದು, ಗ್ರಾಮದ ಹೊರವಲಯಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿ ಹಲ್ಲೆ ಮಾಡಿದ ಆರೋಪ ಕೇಲಳಿ ಬಂದಿದೆ. ಯುವತಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಆಕೆಯನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಿ ಎಸ್ಕೇಪ್ ಆಗಿದ್ದಾನಂತೆ. ಪ್ರೀತಿ ನಿರಾಕರಿಸದ್ದಕ್ಕೆ ಆಟೋದಲ್ಲಿ ಅಪಹರಣ, ಅತ್ಯಾಚಾರ ಬಳಿಕ ಕೊಲೆ ಮಾಡಿದ್ದಾನೆ ಎಂದು ಮೃತ ಅರ್ಪಿತಾ ಪೋಷಕರು ದೂರು ದಾಖಲು ಮಾಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button