Featured StoryUdupi

ಹಿಂದೂ ಸಮಾಜೋತ್ಸವ: ಶರಣ್ ಪಂಪ್‌ವೆಲ್ ಉಡುಪಿ ಪ್ರವೇಶಕ್ಕೆ ತಡೆ

 

ಉಡುಪಿ: ವಿಎಚ್‌ಪಿ- ಬಜರಂಗದಳ ವತಿಯಿಂದ ಉಡುಪಿಯಲ್ಲಿ ನಡೆಯುತ್ತಿರುವ ಹಿಂದೂ ಸಮಾಜೋತ್ಸವದಲ್ಲಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಭಾಗವಹಿಸದಂತೆ ತಡೆಯೊಡ್ಡಲಾಗಿದೆ. ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸೋಮೋಟೊ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ಪಂಪ್‌ವೆಲ್‌ಗೆ ದ.ಕ. ಜಿಲ್ಲೆ ಬಿಟ್ಟು ಹೊರ ಹೋಗದಂತೆ ಷರತ್ತು ವಿಧಿಸಲಾಗಿದೆ. ಅದರಂತೆ ಪೊಲೀಸರು ಅವರಿಗೆ ಇಂದಿನ ಉಡುಪಿಯ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸ ದಂತೆ ತಡೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸುವ ಸಾಧ್ಯತೆಯನ್ನು ಅರಿತ ಪಂಪ್ ವೆಲ್, ಹೆಜಮಾಡಿಯಿಂದಲೇ ಮಂಗಳೂರಿಗೆ ವಾಪಾಸ್ಸು ಆಗಿದ್ದಾರೆಂದು ತಿಳಿದುಬಂದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button