Bengaluru UrbanFeatured Story

ಗಣೇಶ ವಿಸರ್ಜನಾ ಮೆರವಣಿಗೆಗೆ ಅನುಮತಿ ನೀಡದೇ ಇರಲು ಪೊಲೀಸರು ನಿರ್ಧಾರ.

ಬೆಂಗಳೂರು :ಗಣೇಶ ವಿಸರ್ಜನಾ ಮೆರವಣಿಗೆ ಅನುಮತಿ ನೀಡದೆ ಇರಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಎಲ್ಲೆಂದರಲ್ಲಿ ಗಲಭೆ, ಅಹಿತಕರ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಈ ನಿರ್ಧಾರಕ್ಕೆ ಬಂದಿದ್ದಾರೆ.

ನರದಾದ್ಯಂತ ಮೆರವಣಿಗೆ, ಡಿಜೆ ನೃತ್ಯಗಳಿಗೆ ಅನುಮತಿ ನೀಡದೇ ಇರಲು ಎಲ್ಲಾ ಪೊಲೀಸ್ ಠಾಣೆಗಳಿಗೆ ಪೊಲೀಸ್ ಆಯುಕ್ತ ಬಿ ದಯಾನಂದ್ ಸೂಚನೆ ನೀಡಿದ್ದಾರೆ. ಒಂದು ವೇಳೆ ಅನುಮತಿ ಇಲ್ಲದೇ ಗಣೇಶ ಮೆರವಣಿಗೆ ನಡೆದದ್ದೇ ಆದಲ್ಲಿ ಆ ಘಟನೆ ನಡೆದ ವ್ಯಾಪ್ತಿಯ ಇನ್ಸ್ ಪೆಕ್ಟರ್ ನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button