
Crime
ಬಿ .ಎಸ್. ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಅನುಮತಿ ನಿರಾಕರಣೆ ವಿಷಯವನ್ನು ಮರುಪರಿಶೀಲಿಸುವದಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ಒತ್ತಾಯ
ನವದೆಹಲಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಕಾಮಗಾರಿ ಗುತ್ತಿಗೆ ನೀಡಲು ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಅನುಮತಿ ನಿರಾಕರಣೆ ವಿಷಯವನ್ನು ಮರುಪರಿಶೀಲಿಸುವದಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ತಿಳಿಸಿದೆ.
ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಕೋರಿರುವ ಮಂಜೂರಾತಿ ನಿರಾಕರಣೆ ವಿಷಯವನ್ನು ಮರುಪರಿಶೀಲಿಸುವುದಾಗಿ ಕರ್ನಾಟಕ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.ಈ ಪ್ರಕರಣದಲ್ಲಿ ಆರೋಪಗಳು ಗಂಭೀರವಾಗಿರುವುದರಿಂದ ರಾಜ್ಯ ಸರ್ಕಾರ ಈ ವಿಷಯವನ್ನು ಮರುಪರಿಶೀಲಿಸಲಿದೆ ಎಂದು ಕರ್ನಾಟಕದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮನ್ ಪನ್ವಾರ್ ಅವರು ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುಂದೆ ತಿಳಿಸಿದ್ದಾರೆ.




