
Crime
ಅಫ್ಗಾನಿಸ್ತಾನ್ :ಮತ್ತೆ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.3ರಷ್ಟು ದಾಖಲು
ಪಶ್ಚಿಮ ಅಫ್ಗಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ಚಾಹಕ್ ಗ್ರಾಮದಲ್ಲಿ 700 ಮನೆಗಳು ಕುಸಿದಿವೆ
ಭೂಕಂಪದ ಪರಿಣಾಮ 117 ಮಂದಿ ಗಾಯಗೊಂಡಿದ್ದು ಅವರನ್ನು ಹೆರಾತ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 6.3ರಷ್ಟು ದಾಖಲಾಗಿದೆ, ಹೆರಾತ್ ಪಟ್ಟಣದ ಹೊರವಲಯದಲ್ಲಿ ಭೂಮಿಯಿಂದ 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ.ಭೂಕಂಪದ ಪರಿಣಾಮವಾಗಿ ಭೂಕುಸಿತ ಸಂಭವಿಸಿ ಹೆರಾತ್ ಬಳಿಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ
ಪಶ್ಚಿಮ ಅಫ್ಗಾನಿಸ್ತಾನದಲ್ಲಿ ಈಚೆಗೆ ಸಂಭವಿಸಿದ ಸರಣಿ ಭೂಕಂಪಗಳಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು




