
Bengaluru UrbanFeatured Story
ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಆಗದೆ ಇದ್ದರೆ ಹೆಸ್ಕಾಂ ಕಚೇರಿಗಳಿಗೆ ಬೀಗ ಹಾಕಲಾಗುವುದು : ಸರ್ಕಾರಕ್ಕೆ ಬೊಮ್ಮಾಯಿ ಎಚ್ಚರಿಕೆ
ಚಿಕ್ಕಬಳ್ಳಾಪುರ : ರಾಜ್ಯದ ರೈತರಿಗೆ ನಿರಂತರ ಏಳು ಗಂಟೆಗಳ ಕಾಲದವರೆಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡದೇ ಹೋದಲ್ಲಿ, ವಿದ್ಯುತ್ ಸರಬರಾಜು ಕಂಪನಿ ಗಳಿಗೆ ಬೀಗ ಜಡಿಯಲಾಗುವುದು ಎಂದು ಹಾಕಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ರೈತರಿಗೆ ಸಮಪರ್ಕವಾಗಿ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ಕರ್ತವ್ಯ. ಆದರೆ, ಈ ನಿಟ್ಟಿನಲ್ಲಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಇಂಧನ ಇಲಾಖೆಗೆ 10 ಸಾವಿರ ಕೋಟಿ ರೂ. ಅನುದಾನ ಕೊಟ್ಟಿತ್ತು ಎಂದರು. ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಹಣವೇ ಇಲ್ಲವಾಗಿದ್ದು, ಇಲಾಖೆಗೆ ಹಾಗೂ ಕಲ್ಲಿದ್ದಲು ಖರೀದಿಸಲು ಅನುದಾನ ಬಿಡುಗಡೆ ಮಾಡಿಲ್ಲ. ಅಲ್ಲದೇ, ರೈತರಿಗೆ ಪ್ರತಿನಿತ್ಯ ಸರಿಯಾಗಿ ಎರಡು ಗಂಟೆ ವಿದ್ಯುತ್ ಕೂಡ ನೀಡುತ್ತಿಲ್ಲ. ಆದರೆ, ಕಳೆದ ಮೂರು ತಿಂಗಳಲ್ಲಿ ಎರಡು ಬಾರಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ’ ಎಂದು ಆರೋಪಿಸಿದರು.




