
ಮುಸ್ಲಿಮರ 2ಬಿ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿ ಎಸ್ ಡಿ ಪಿ ಐ ಉಡುಪಿ ಜಿಲ್ಲೆ ವತಿಯಿಂದ ಧರಣಿ
ಉಡುಪಿ: ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ದಿಗಾಗಿ ಕಾಂತರಾಜ್ ಆಯೋಗದ ವರದಿಯನ್ನು ಬಿಡುಗಡೆಗೊಳಿಸಬೇಕು ಮತ್ತು ಮುಸ್ಲಿಮರ 2ಬಿ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿ ಎಸ್ ಡಿ ಪಿ ಐ ಉಡುಪಿ ಜಿಲ್ಲೆ ವತಿಯಿಂದ ಗುರುವಾರ ಉಡುಪಿ ತಾಲೂಕು ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿತ್ತು
ಬಸವರಾಜ ಬೊಮ್ಮಾಯಿ ಸರ್ಕಾರವು ಒಬಿಸಿ ವರ್ಗದಿಂದ ಮುಸ್ಲಿಮರನ್ನು ಹೊರಗಿಡಲು ನಿರ್ಧರಿಸಿ 2ಬಿ ಕೆಟಗರಿಯಡಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿತ್ತು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೂಡಲೇ ಮುಸ್ಲಿಮರ 2ಬಿ ಮೀಸಲಾತಿ ರದ್ದತಿಯ ಬಿಜೆಪಿ ಸರ್ಕಾರದ ಶಿಫಾರಸ್ಸನ್ನು ರದ್ದು ಮಾಡಿ ಕೋರ್ಟ್ ದಾವೆಯನ್ನು ಹಿಂಪಡೆಯಬೇಕು. ಕೂಡಲೇ 2ಬಿ ಮೀಸಲಾತಿಯ ಪ್ರಮಾಣವನ್ನು ಶೇ.8ಕ್ಕೆ ಏರಿಸಬೇಕು.
ಜಾತಿವಾದಿಗಳು, ಕೋಮುವಾದಿಗಳಿಂದ ಎದುರಾದ ಸವಾಲುಗಳನ್ನು ಮೀರಿ ಜಾತಿ ಗಣತಿ ಪಟ್ಟಿಯನ್ನು ಬಿಡುಗಡೆಗೊಳಿಸಿದ
ಬಿಹಾರ ರಾಜ್ಯದ ಮಾದರಿಯನ್ನು ಅನುಸರಿಸಿ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ , ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಿ ಬಿಡುಗಡೆ ಮಾಡಬೇಕೆಂದು ಧರಣಿ ನಿರತರು ಒತ್ತಾಯಿಸಿದರು.
ಧರಣಿಯಲ್ಲಿ ಧರ್ಮಗುರು ಫಾದರ್ ವಿಲಿಯಂ ಮಾರ್ಟಿಸ್, ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲಿ, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅಶ್ರಫ್ ಬಾವ, ವಿಮೆನ್ ಇಂಡಿಯಾ ಮೂಮೆಂಟ್ ಜಿಲ್ಲಾಧ್ಯಕ್ಷರಾದ ನಾಝಿಯ ನಸ್ರುಲ್ಲಾ , ಕಂಡ್ಲೂರು ಗ್ರಾಪಂ ಅಧ್ಯಕ್ಷೆ ನೌಶಿನ್ ನಸ್ರತ್, ಮುಖಂಡರಾದ ಹನೀಫ್ ಮುಳೂರು, ಮಜೀದ್ ಪೊಲ್ಯ ಮೊದಲಾದವರು ಉಪಸ್ಥಿತರಿದ್ದರು.




