
Udupi
ಕಾಪು :ಬಸ್ ಇಳಿಯುತ್ತಿದ್ದ ವೇಳೆ ಮಹಿಳೆಯೊಬ್ಬರು ಆಯತಪ್ಪಿ ಕೆಳಗೆ ಬಿದ್ದು ಗಾಯ
ಕಾಪು :ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿಯಲ್ಲಿ ಬಸ್ ಇಳಿಯುತ್ತಿದ್ದ ವೇಳೆ ಮಹಿಳೆಯೊಬ್ಬರು ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಗಾಯಗೊಂಡಿದ್ದಾರೆ.
ಗಾಯಗೊಂಡ ಮಹಿಳೆಯನ್ನು ಉಳಿಯಾರಗೋಳಿ ಕೋತಲಕಟ್ಟೆ ನಿವಾಸಿ ಸುಲೋಚನಾ ಶೆಟ್ಟಿ (61) ಎಂದು ಗುರುತಿಸಲಾಗಿದೆ. ಉಡುಪಿ ಕಡೆಗೆ ಹೋಗುತ್ತಿದ್ದ ಸರ್ವೀಸ್ ಬಸ್ ಉಳಿಯಾರಗೋಳಿಯಲ್ಲಿ ನಿಂತಿದ್ದು ಈ ವೇಳೆ ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿಯುತ್ತಿರುವಾಗಲೇ ಬಸ್ ಚಾಲಕ ಬಸ್ಸನ್ನು ಮುಂದಕ್ಕೆ ಚಲಾಯಿಸಿದ್ದನು ಎನ್ನಲಾಗಿದ್ದು ಈ ವೇಳೆ ಮಹಿಳೆ ಆಯ ತಪ್ಪಿ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ.q




