
Dakshina Kannada
ಶಿರ್ವ : ಕಾಣೆಯಾಗಿದ್ದ ಯವತಿಯ ಶವ ನದಿಯಲ್ಲಿ ಪತ್ತೆ
ಶಿರ್ವ :ನಾನು ಉಡುಪಿಗೆ ಹೋಗಿ ಬರುತ್ತೇನೆ ಎಂದು ಹೇಳಿ ನಾಪತ್ತೆ ಯಾಗಿದ್ದ ಯುವತಿಯ ಶವ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಬಳಿ ಪಟ್ಟೆಯಾಗಿದೆ.
ಈಕೆ ಮೂಡುಬೆಳ್ಳೆ ಕೊಂಗಿಬೈಲು ನಿವಾಸಿಯಾಗಿದ್ದರು.ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ನಾನು ಉಡುಪಿ ಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು. ಆದರೆ ಮನೆಗೆ ವಾಪಸ್ ಬಂದಿರಲಿಲ್ಲ ಎನ್ನಲಾಗಿದೆ.
ಬಿ.ಕಾಂ. ಪದವೀಧರೆಯಾಗಿದ್ದ ಆಕೆ ಉಡುಪಿ ಎಂಜಿಎಂ ಕಾಲೇಜ್ ಬಳಿಯ ಎಲೆಕ್ಟ್ರಿಕಲ್ ಬೈಕ್ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು. ಮಾನಸಿಕವಾಗಿ ನೊಂದಿದ್ದ ಈಕೆ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.




