
Tumakuru
ಸುಳ್ಳು ಪೋಸ್ಟ್ ಹಾಕಿದ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪ್ರಕರಣ ದಾಖಲು
ತುಮಕೂರು: ‘ಬೆಂಗಳೂರಿನ ಲುಲು ಶಾಪಿಂಗ್ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ’ ಎಂದು ಸುಳ್ಳು ಪೋಸ್ಟ್ ಹಂಚಿಕೊಂಡಿದ್ದ ಪ್ರಕರಣದ ಮೇಲೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್ ನವರಿಗೆ? @ಡಿ.ಕೆ. ಶಿವಕುಮಾರ್ #ಬಾಯ್ಕಾಟ್ ಲುಲುಮಾಲ್’ ಎಂದು ಸಪ್ತಗಿರಿ ಬಡಾವಣೆಯ ನಿವಾಸಿ ಶಕುಂತಲಾ ಬುಧವಾರ ತಮ್ಮ ಎಕ್ಸ್ ಖಾತೆಯಲ್ಲಿ ಚಿತ್ರವೊಂದನ್ನು ಪೋಸ್ಟ್ ಮಾಡಿದ್ದರು.
ಈ ಹಿಂದೆಯೂ ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೊ ಸೆರೆ ಹಿಡಿದ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶಕುಂತಲಾ ಅವಹೇಳನಕಾರಿ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.




