Mumbai

ನವರಾತ್ರಿ ಮೆರವಣಿಗೆ ವೇಳೆ ಪಟಾಕಿ ಸಿಡಿದು ನಾಲ್ವರಿಗೆ ಗಾಯ

ಮಹಾರಾಷ್ಟ್ರ : ಥಾಣೆಯಲ್ಲಿ ದುರ್ಗಾ ದೇವಿಯ ವಿಗ್ರಹವನ್ನು ಹೊತ್ತ ನವರಾತ್ರಿ ಮೆರವಣಿಗೆ ರಾಜಾರೋಷವಾಗಿ ನಡೆಯುತ್ತಿತ್ತು.ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸಿದ್ದರಿಂದ ಕನಿಷ್ಠ ನಾಲ್ಕು ಜನರಿಗೆ ಸುಟ್ಟ ಗಾಯಗಳಾಗಿವೆ.

ನವರಾತ್ರಿ ಆಚರಣೆಯ ಭಾಗವಾಗಿ ಕೆಲವರು ವಿಗ್ರಹವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದರು. ದುರ್ಗಾ ದೇವಿಗೆ ಸಮರ್ಪಿತವಾದ ಒಂಬತ್ತು ದಿನಗಳ ಹಿಂದೂ ಹಬ್ಬವು ಭಾನುವಾರ ಪ್ರಾರಂಭವಾಯಿತು. ಘಟನೆಯ ಸಮಯದಲ್ಲಿ ಕಲ್ಲು ತೂರಾಟ ನಡೆಸಿದ ನಂತರ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಹಾಗೂ ಮೆರವಣಿಗೆಯ ಸಮಯದಲ್ಲಿ, ಯಾರೋ ಅಜಾಗರೂಕತೆಯಿಂದ ಪಟಾಕಿಗಳನ್ನು ಸಿಡಿಸಿದ್ದರಿಂದ ಕೆಲವರಿಗೆ ಸುಟ್ಟ ಗಾಯಗಳಾಗಿದೆ .ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಜಗಳದ ಸಮಯದಲ್ಲಿ ಕಲ್ಲು ತೂರಾಟದಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button