Dakshina KannadaAccident News

ನೇತ್ರಾವತಿ ಸೇತುವೆಯಲ್ಲಿ ಕೆಟ್ಟು ನಿಂತ ಲಾರಿಗೆ ವಾಹನಗಳ ಡಿಕ್ಕಿ | ಬಸ್ ಸೇರಿ 6 ವಾಹನಗಳ ಸರಣಿ ಅಪಘಾತ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿಯೊಂದು ನೇತ್ರಾವತಿ ನದಿಯ ಸೇತುವೆಯಲ್ಲಿ ಕೆಟ್ಟು ನಿಂತ ಪರಿಣಾಮ ಸೋಮವಾರ ಸಂಜೆ ಆರು ವಾಹನಗಳು ಒಂದೊಕ್ಕೊಂದು ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆದಿದೆ. ಮಳೆಯೂ ಬರುತ್ತಿದ್ದ ಕಾರಣ ಕೆಟ್ಟು ನಿಂತ ವಾಹನ ಗೋಚರಿಸದ ಪರಿಣಾಮ ಅಪಘಾತ ಸಂಭವಿಸಿದೆ.

ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ಸೇತುವೆ ಮಧ್ಯಭಾಗದಲ್ಲಿ ಹೆದ್ದಾರಿಯಲ್ಲಿ ಕೆಟ್ಟು ನಿಂತಿತ್ತು. ಅದಕ್ಕೆ ಆಲ್ಟೊ ಕಾರು, ಲಾರಿ, ರಿಟ್ಝ್ ಕಾರು, ಕಾಂಟೆಸ್ಸಾ ಕಾರು, ಪಿಕಪ್ ವಾಹನ ಹಾಗೂ ಕೊನೆಯದಾಗಿ ಕುಂಪಲ ಕಡೆಗೆ ತೆರಳುವ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಒಟ್ಟು ಆರು ವಾಹನಗಳು ಜಖಂಗೊಂಡಿವೆ.

‘ಘಟನೆಯಲ್ಲಿ ಕೆಲವರಿಗೆ ಸ್ವಲ್ಪಗಾಯಗಳಾಗಿವೆ. ಸರಣಿ ಅಪಘಾತದಿಂದಾಗಿ ಹೆದ್ದಾರಿಯಲ್ಲಿ 2 ಗಂಟೆ ಕಾಲ ವಾಹನ ಸಂಚಾರ ದಟ್ಟಣೆ ಉಂಟಾಯಿತು. ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ವಾಹನ ಸಂಚಾರ ಸುಸ್ಥಿತಿಗೆ ತರಲು ಹರಸಾಹಸ ಪಟ್ಟರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button