Accident News

ಶಬರಿಮಲೆ ಯಾತ್ರಿಕರಿದ್ದ ಬಸ್ ಪಲ್ಟಿ, ಕೋಲಾರ ಜಿಲ್ಲೆಯ 13ಕ್ಕೂ ಹೆಚ್ಚು ಮಂದಿಗೆ ಗಾಯ

ಕೇರಳ,ಅ.18: ಶಬರಿಮಲೆಗೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಪಲ್ಟಿಯಾಗಿ 13 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.

ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಸಮೀಪದ ಕನಮಲ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.ಕೋಲಾರ ಜಿಲ್ಲೆಯಿಂದ ಬಂದ ಯಾತ್ರಾರ್ಥಿಗಳು ಪತ್ತನಂತಿಟ್ಟ ಜಿಲ್ಲೆಯಲ್ಲಿರುವ ಬೆಟ್ಟದ ದೇಗುಲಕ್ಕೆ ತೆರಳುತ್ತಿದ್ದರು.ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದ್ದು, 40 ಯಾತ್ರಾರ್ಥಿಗಳು ಸೇರಿದಂತೆ 43 ಮಂದಿ ವಾಹನದಲ್ಲಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಗೊಂಡ ನಾಲ್ವರು ಯಾತ್ರಾರ್ಥಿಗಳನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button