Crime

ಬಳ್ಳಾರಿ: ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನ ಆಚರಣೆ

ಬಳ್ಳಾರಿ,ಸೆ.30: ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಅ.1ರಂದು ಬೆಳಗ್ಗೆ 11ಕ್ಕೆ ಪಾರ್ವತಿ ನಗರದ ಪೊಲೀಸ್ ಜೀಮ್ ಖಾನಾದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಕೆ.ಮಹಾಂತೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯ ಪರಿಸರ,ಜೀವಿಶಾಸ್ತ್ರ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಆನಂದಸಿಂಗ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಸಂಸದರಾದ ವೇ.ದೇವೇಂದ್ರಪ್ಪ,ಜಿ.ಎಂ.ಸಿದ್ದೇಶ್ವರ,ಸಂಗಣ್ಣ ಕರಡಿ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ,ಬಿ.ನಾಗೇಂದ್ರ,ಪಿ.ಟಿ.ಪರಮೇಶ್ವರ ನಾಯಕ್, ಎನ್.ವೈ.ಗೋಪಾಲಕೃಷ್ಣ, ಭೀಮಾನಾಯಕ್, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿ.ಕರುಣಾಕರರೆಡ್ಡಿ, ಎಂ.ಎಸ್.ಸೋಮಲಿಂಗಪ್ಪ, ಜೆ.ಎನ್.ಗಣೇಶ, ಎಸ್.ವಿ.ರಾಮಚಂದ್ರ, ಡಾ.ಚಂದ್ರಶೇಖರ ಪಾಟೀಲ್, ತಾಪಂ ಅಧ್ಯಕ್ಷೆ ಎಸ್.ಆರ್.ಲೀಲಾವತಿ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್.ಮಲ್ಲೂರು, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಪಂ ಸಿಇಒ ಕೆ.ಆರ್.ನಂದಿನಿ,ಎಸ್ಪಿ ಸೈದುಲು ಅಡಾವತ್ ಅವರು ಆಗಮಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ ಅವರು ಉಪಸ್ಥಿತರಿರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button