Bengaluru UrbanFeatured Story

ಕೃಷಿ ಕ್ಷೇತ್ರದ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ : ಸಿದ್ದರಾಮಯ್ಯ ಭರವಸೆ

ಬೆಂಗಳೂರು:ಇನ್ನು ಮುಂದೆ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ಹಾಗೂ ಅಗತ್ಯ ಅನುದಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು ಮಳೆ ಆಧಾರಿತ ಕೃಷಿ ಮಾಡಬೇಕಿದೆ. ಇದರ ಜತೆ ಐದು ವರ್ಷಕ್ಕೊಮ್ಮೆ ಅತಿವೃಷ್ಟಿ, ಅನಾವೃಷ್ಟಿ ಬರಲಿದೆ. ಇದರ ಮಧ್ಯೆ ಕೃಷಿ ಮಾಡಬೇಕು. ಇದಕ್ಕೆ ಪೂರಕವಾಗಿ ಸಂಶೋಧನೆಗಳು ಹೆಚ್ಚೆಚ್ಚು ನಡೆಯಬೇಕು. ಖುಷಿ ಬೇಸಾಯ, ಹೊಸ ತಳಿ, ಹೊಸ ತಾಂತ್ರಿಕತೆ ಮೂಲಕ ಕೃಷಿ ಕ್ಷೇತ್ರದ ಬೆಳವಣಿಗೆಯಾಗಬೇಕು. ಮಳೆ ಕಡಿಮೆಯಾಗಿದೆ, ಬರಗಾಲವಿದೆ, ಕಡಿಮೆ ನೀರಿನಲ್ಲಿ ಯಾವ ಬೆಳೆ ಬೆಳಯಬಹುದು ಎಂದರು.

ಭಾರತ ಕೃಷಿ ಪ್ರಧಾನ ದೇಶ. ಹಳ್ಳಿಗಾಡಿನ ದೇಶ. ಹಳ್ಳಿಗಾಡಿನ ಬಹುತೇಕ ಜನರು ಕೃಷಿ ಮೇಲೆ ಅವಲಂಭಿಸಿದ್ದಾರೆ. ಕೃಷಿ ಮಾಡಿ ದೇಶದ ಜನರಿಗೆ ಆಹಾರ ಪೂರೈಕೆ ಮಾಡುತ್ತಿದ್ದಾರೆ. ಜನಸಂಖ್ಯೆ ಬೆಳೆಯುತ್ತಿದೆ. ಜಗತ್ತಿನಲ್ಲಿ ನಾವು ಜನಸಂಖ್ಯೆಯಲ್ಲಿ ಮೊದಲ ಸ್ಥಾನಕ್ಕೆ ಬಂದಿದ್ದೇವೆ ಎಂದು ಅಭಿಪ್ರಾಯ ಪಟ್ಟರು.,

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button