Bidar

ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರಾಗಿ ಅಮರ ಖಂಡ್ರೆ ಆಯ್ಕೆ

ಬೀದರ್ : ಇಂದು ಜಿಲ್ಲೆಯ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಸಹೋದರ ಅಮರ್ ಖಂಡ್ರೆ ಅವರಿಗೆ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸ್ಥಾನ ಒಲಿದಿದೆ.

ಈ ಹಿಂದೆ ಅಕ್ಟೋಬರ್ 4 ರಂದು ನಡೆದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಸಚಿವ ಈಶ್ವರ್ ಖಂಡ್ರೆ ಬಣ ಭರ್ಜರಿ ಜಯಭೇರಿ ಬಾರಿಸಿತ್ತು. 15 ನಿರ್ದೇಶಕರ ಸ್ಥಾನದಲ್ಲಿ ಖಂಡ್ರೆ ಬಣ 10 ಸ್ಥಾನ ಗೆದ್ದರೆ. ಉಮಾಕಾಂತ್ ನಾಗಮಾರಪಳ್ಳಿ ಬಣಕ್ಕೆ ಕೇವಲ 5 ಸ್ಥಾನಗಳು ಮಾತ್ರ ಸಿಕ್ಕಿತ್ತು. ಇದರ ಬೆನ್ನಲ್ಲೇ ಇಂದು ನಡೆದ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದಲ್ಲಿ ಸಚಿವರ ಸಹೋದರ ಅಮರ್ ಖಂಡ್ರೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರ ಪುತ್ರರಿಗೆ ಒಲಿದು ಬಂದಿದೆ. 38 ವರ್ಷದ ಇತಿಹಾಸದಲ್ಲೇ ಮೊದಲ ಬಾರಿಗೆ ಈಶ್ವರ್ ಖಂಡ್ರೆ ಹಾಗೂ ಪಾಟೀಲ್ ಕುಟುಂಬ ಡಿಸಿಸಿ ಬ್ಯಾಂಕಿನ ಅಧಿಕಾರ ವಹಿಸಿಕೊಂಡಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button