Crime

ಹೀನಾಯ ಸೋಲಿನಿಂದ ಬಿಜೆಪಿ ನಾಯಕರು ಮೈ ಕೈ ಪರಚಿಕೊಳ್ಳುತ್ತಿದ್ದಾರೆ : ಡಿಕೆಶಿ ವ್ಯಂಗ್ಯ

ಹುಕ್ಕೇರಿ (ಅ.19): ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ನಂತರ ಬಿಜೆಪಿ ನಾಯಕರು ತಲೆ ಬಿಸಿ ಯಿಂದ ಮೈ ಕೈ ಪಾರಾಚಿಕೊಳ್ಳುತ್ತಿದ್ದಾರೆ. ಸುಮ್ಮನೆ ಕಾಂಗ್ರೆಸ್ ಅನ್ನು ದೋಷಸುತ್ತಿದ್ದಾರೆ ಎಂದು ದೂರಿದ್ದಾರೆ.

ಕಾಂಗ್ರೆಸ್ ಎಲ್ಲ ವರ್ಗದ ಜನರಿಗೆ ನ್ಯಾಯ-ರಕ್ಷಣೆ ಒದಗಿಸಿದೆ. ಐತಿಹಾಸಿಕ ತೀರ್ಮಾನ ಕೈಗೊಂಡು ಜನರ ಬದುಕಿನಲ್ಲಿ ಬದಲಾವಣೆ ತಂದಿದೆ. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಿದೆ. ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ, ಗೃಹಜ್ಯೋತಿ, ಮಹಿಳೆಯರ ಉಚಿತ ಬಸ್ ಪ್ರಯಾಣ, ಹೆಚ್ಚುವರಿ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ.

ಕಾರ್ಯಕರ್ತರ ಹೋರಾಟ ವ್ಯರ್ಥವಾಗದಂತೆ ನಾವು ನೋಡಿಕೊಳುತ್ತೇವೆ ಎಂದು ಡಿ. ಕೆ ಶಿ ಹೇಳಿದರು. ನಿಮ್ಮ ಆಶೀರ್ವಾದದಿಂದ 136 ಸೀಟುಗಳನ್ನು ಗೆದ್ದು ಸೇವೆ ಮಾಡುತ್ತಿದ್ದೇವೆ. ನಾನು ನಿಮ್ಮಿಂದ ಸನ್ಮಾನ ಮಾಡಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ. ನೀವೆಲ್ಲಾ ಹೋರಾಟ ಮಾಡಿ ಕಾಂಗ್ರೆಸ್ ಸರ್ಕಾರವನ್ನು ತಂದಿದ್ದೀರಿ ಎಂದು ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button