
Bengaluru UrbanFeatured Story
ರಾಜ್ಯ ಸರ್ಕಾರದಿಂದ `ಮಹಿಳೆ’ಯರಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ
ಬೆಂಗಳೂರು: ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದೆ. ರಾಜ್ಯ ಸರ್ಕಾರವು ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗೆ 70,427 ಕೋಟಿ ಹಣವನ್ನು ಮೀಸಲಿಟಿದೆ.ಈ ಹಣವನ್ನು ಮಹಿಳೆಯರಿಗಾಗಿಯೇ ಉಪಯೋಗಿಸಲಿದೆ.
ರಾಜ್ಯದ ಒಟ್ಟು 1 ಲಕ್ಷದ 65 ಸಾವಿರ ಸ್ತ್ರೀ ಶಕ್ತಿ ಗುಂಪುಗಳಿಗೆ ತಲಾ 25 ಸಾವಿರ ರೂ. ಆವರ್ತ ನಿಧಿ, ಸ್ತ್ರೀ ಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ತಿಳಿಸಿದ್ದಾರೆ. ಸ್ತ್ರೀ ಶಕ್ತಿ ಆರಾಧನೆಯ ಈ ನವರಾತ್ರಿಯ ಶುಭ ಸಂದರ್ಭದಲ್ಲಿ ನಮ್ಮ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದ್ದು, ಮಹಿಳೆಯರ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.




