
Bengaluru UrbanFeatured Story
ಅಯೋಧ್ಯೆಯ ದೇವಾಲಯವೊಂದರ ಅರ್ಚಕರ ಶವ ದೇವಸ್ಥಾನದ ಆವರಣದಲ್ಲಿ ಪತ್ತೆ
ಅಯೋಧ್ಯೆ:ಅಯೋಧ್ಯೆಯ ದೇವಾಲಯದಲ್ಲಿ ಅರ್ಚಕರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. 44 ವರ್ಷದ ಅರ್ಚಕರ ಶವ ರಾಮ ಜನ್ಮಭೂಮಿ ಆವರಣದ ಹೊರವಲಯದಲ್ಲಿ ಪತ್ತೆಯಾಗಿದೆ
ದಾಸ್ ಇಬ್ಬರು ಶಿಷ್ಯರೊಂದಿಗೆ ಹನುಮಾನ್ ಗರ್ಹಿ ದೇವಸ್ಥಾನದ ಪಕ್ಕದ ಕೋಣೆಯಲ್ಲಿ ತಂಗಿದ್ದರು. ಹಿಂದುಸ್ತಾನ್ ಟೈಮ್ಸ್ ವರದಿಯ ಪ್ರಕಾರ ಅವರಿಬ್ಬರೂ ಕೊಲೆ ಪ್ರಕರಣದ ಪ್ರಮುಖ ಶಂಕಿತರು ಎಂದು ಪೊಲೀಸರು ತಿಳಿಸಿದ್ದಾರೆ.ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜ್ ಕರಣ್ ನಯ್ಯರ್ ಅವರು ಶಂಕಿತರಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಎರಡನೆಯವನು ಇನ್ನೂ ತಲೆಮರೆಸಿಕೊಂಡಿದ್ದಾನೆ. ಆರೋಪಿ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ.
ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬೆಳಗಿನ ಪ್ರಾರ್ಥನೆಗೆ ಬಾರದ ಹಿನ್ನೆಲೆಯಲ್ಲಿ ದಾಸ್ ಅವರ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.




