ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.
ಪುಣಚ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಶ್ರೀಕೃಷ್ಣ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಆತ ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.