Accident News

ಬೆಂಗಳೂರು : ಎರಡು ಕಾರುಗಳ ನಡುವೆ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಮೃತ್ಯು

ಬೆಂಗಳೂರು :ಬೆಂಗಳೂರಿನಲ್ಲಿ ಎರಡು ಕಾರ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ದಿಕ್ಕಿಯ ತೀವ್ರತೆಗೆ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬಂದು ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್ ಏರ್ಪೋರ್ಟ್ ಕಡೆಗೆ ಹೋಗುತ್ತಿದ್ದ ಮತ್ತೊಂದು ಕಾರ್ ಗೆ ಡಿಕ್ಕಿ ಹೊಡೆದಿದೆ.ಕಾರ್ ನಲ್ಲಿದ್ದ ಶೇಕ್ ಮಹಮ್ಮದ್ ಸಾವನ್ನಪ್ಪಿದ್ದು, ಮೂವರು ಸ್ನೇಹಿತರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button