
Udupi
ಕಾಪು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ಕಾಪು: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಕಲ್ತಟ್ಟ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಶಂಕರಪುರ ಸೈಂಟ್ ಜೋನ್ ಪ.ಪೂ ಕಾಲೇಜಿನ ವಿದ್ಯಾರ್ಥಿನಿ, ಕಲ್ತಟ್ಟ ನಿವಾಸಿ ಆನಂದ ಪೂಜಾರಿ ಎಂಬವರ ಪುತ್ರಿ ಅನನ್ಯಾ (17) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಆಕೆ, ತನ್ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಈಕೆ ತಂದೆ ತಾಯಿ ಮತ್ತು ಸಹೋದರನನ್ನು ಅಗಲಿದ್ದಾಳೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




