Udupi

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ವಂಚನೆ ಪ್ರಕರಣ:: 25 ಮಂದಿ ವಿರುದ್ಧ ಮೊಕದ್ದಮೆ ದಾಖಲು

ಬ್ರಹ್ಮಾವರ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿ ಅವ್ಯವಹಾರ ಎಸಗಿರುವ 25 ಮಂದಿ ಆರೋಪಿಗಳ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಎಲ್ಲ ಆರೋಪಿಗಳು ಸೇರಿ 2021ರ ಆ.18ರಿಂದ 2022ರ ಡಿ5ರ ಮಧ್ಯಾವಧಿ ಯಲ್ಲಿ ಕಾರ್ಖಾನೆಯ ಸಕ್ಕರೆ ಸ್ಥಾವರ ಮತ್ತು ಯಂತ್ರೋಪಕರಣಗಳ ಮಾರಾಟಕ್ಕೆ ಸಂಬಂಧಿಸಿದಂತೆ ಟೆಂಡರ್ ಕಮ್ ಹರಾಜು ಪ್ರಕ್ರಿಯೆಯಲ್ಲಿ ವಂಚನೆ, ದಾಖಲೆಗಳನ್ನು ರಚಿಸುವಲ್ಲಿ ಅವರ ಪಾತ್ರವನ್ನು ದುರುಪಯೋಗಪಡಿಸಿಕೊಂಡಿದ್ದು, ವೈಯಕ್ತಿಕ ಲಾಭ ಪಡೆಯುವ ಉದ್ದೇಶದಿಂದ ಅವರು ಪರಸ್ಪರ ಪಿತೂರಿ ನಡೆಸಿ ರೈತರಿಗೆ ಮತ್ತು ಸರಕಾರಕ್ಕೆ 14ಕೋಟಿಗಿಂತ ಕಡಿಮೆ ಇಲ್ಲದಷ್ಟು ಹಣವನ್ನು ಆರ್ಥಿಕ ನಷ್ಟವನ್ನು ಉಂಟು ಮಾಡಿದ್ದಾರೆ ಎಂದು ದೂರಲಾಗಿದೆ.

ಈ ಬಗ್ಗೆ ಕುಂದಾಪುರದ ಸತೀಶ್ ನೀಡಿದ ನ್ಯಾಯಾಲಯದ ಖಾಸಗಿ ದೂರಿ ನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button