Bengaluru UrbanFeatured Story

ಖಾಸಗಿ ಶಾಲೆ ನವೀಕರಣ, ಪ್ರತಿ ವರ್ಷ ದಾಖಲೆ ಕೇಳುವುದು ಸರಿಯಲ್ಲ

ಬೆಂಗಳೂರು: ಕರ್ನಾಟಕ ಸರ್ಕಾರ 2023-24ನೇ ಸಾಲಿನಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸೂಚನೆ ನೀಡಿತ್ತು. ಆದರೆ ಪ್ರತಿವರ್ಷ ನವೀಕರಣ ಮಾಡುವಾಗಲೂ ದಾಖಲೆಗಳನ್ನು ಕೇಳುವುದು ಸರಿಯಲ್ಲ ಎಂದು ಬಸವರಾಜ ಹೊರಟ್ಟಿ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರವನ್ನು ಬರೆದಿದ್ದಾರೆ. ಈ ಅವೈಜ್ಞಾನಿಕ ಪದ್ಧತಿಯನ್ನು ಸರಿಪಡಿಸಬೇಕು ಎಂದು ಸೂಚನೆ ನೀಡಿದ್ದಾರೆ. ಹೊರಟ್ಟಿ ಪತ್ರದ ಸಾರಂಶ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣ ಕುರಿತಂತೆ ಪ್ರತಿ ವರ್ಷ ಸಲ್ಲಿಸಲಾಗುತ್ತಿರುವ ಪ್ರಸ್ತಾವನೆಯಲ್ಲಿ ಹಲವಾರು ಷರತ್ತುಗಳನ್ನು ವಿಧಿಸಲಾಗುತ್ತಿದೆ ಇದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button