Crime

ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕಲಬುರಗಿ.ಸೆ.30:-ಕಲಬುರಗಿ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ಶಿಕ್ಷಕರಿಗೆ 2020ನೇ ಸಾಲಿನಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ www.dwdsc.kar.nic.in ವೆಬ್‍ಸೈಟ್‍ದಿಂದ ಅಥವಾ ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿಯಿಂದ ಪಡೆಯಬೇಕು. ಭರ್ತಿ ಮಾಡಿದ ಅರ್ಜಿ ನಮೂನೆ/ಪ್ರಸ್ತಾವನೆಗಳನ್ನು ಕಲಬುರಗಿ ಚಂದ್ರಶೇಖರ ಪಾಟೀಲ ಕ್ರಿಡಾಂಗಣದ ಎದುರುಗಡೆಯಿರುವ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿಯಲ್ಲಿ 2020ರ ಅಕ್ಟೋಬರ್ 15 ರೊಳಗಾಗಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button