Udupi

ಪಡುಬಿದ್ರೆ: ಬಸ್-ಬೈಕ್ ಅಪಘಾತ | ಬೈಕ್ ಸವಾರ ಮೃತ್ಯು

ಪಡುಬಿದ್ರೆ: ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ‌ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ.ಮಂಗಳೂರು ಕಡೆಗೆ ತೆರಳುವ ಖಾಸಗಿ ಬಸ್, ಪಡುಬಿದ್ರೆ ಪೇಟೆಯ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿತ್ತು. ಈ ವೇಳೆ ಹಿಂದಿನಿಂದ ಬಂದ ಬೈಕ್,ಬಸ್ ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಪ್ರಜ್ವಲ್‌ ರಸ್ತೆಗೆ ಎಸೆಯಲ್ಪಟ್ಟಿದ್ದರು.

ಈ ಸಮಯ ಟ್ಯಾಂಕರ್ ಹರಿದ ಪರಿಣಾಮ ಪ್ರಜ್ವಲ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG 20231103 WA0090 Udupi

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button