
Featured StoryState News
ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾನುವಾರ ರಾತ್ರಿ ಸುರಿದ ಮಳೆ
ದಕ್ಷಿಣ ಒಳನಾಡು, ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರವೂ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಕೊಡಗಿನ ಸೋಮವಾರಪೇಟೆ, ಮೈಸೂರು ಜಿಲ್ಲೆಯ ಹುಣಸೂರು ನಗರ, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ತಲಾ 4 ಸೆ.ಮೀ. ಮಳೆ ಸುರಿದಿದೆ.
ಉಡುಪಿ ಜಿಲ್ಲೆಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಭಾನುವಾರ ರಾತ್ರಿ ಸುರಿದಿದೆ.
ಮಂಗಳೂರು ನಗರ, ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣ, ರಾಮನಗರ,ಮಾಗಡಿ, ಚಾಮರಾಜನಗರ ಜಿಲ್ಲೆ ಬಂಡೀಪುರ, ಚಿಕ್ಕಬಳ್ಳಾಪುರದ ಚಿಂತಾಮಣಿ, ಮೈಸೂರು ಜಿಲ್ಲೆಯ ತಿರುಮಕೂಡಲು ನರಸೀಪುರ, ಸರಗೂರು, ಚಿಕ್ಕಮಗಳೂರು ಜಿಲ್ಲೆಯ ಕಳಸ, ಕೊಡಗಿನ ಭಾಗಮಂಡಲ, ಮಡಿಕೇರಿ, ತುಮಕೂರು ಜಿಲ್ಲೆಯ ಕುಣಿಗಲ್, ಬೆಂಗಳೂರು ನಗರದ ಗೋಪಾಲ್ ನಗರ, ಚಾಮರಾಜನಗರ ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ಕೊಡಗಿನ ಪೊನ್ನಂಪೇಟೆ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮಾಣಿಯಲ್ಲಿ ಉತ್ತಮ ಮಳೆಯಾಗಿರುವ ವರದಿಯಾಗಿದೆ.




