
Dakshina KannadaCrime
ಮಂಗಳೂರು | ಎಂಡಿಎಂಎ ಮಾರಾಟ: ಮೂವರ ಬಂಧನ
ಮಂಗಳೂರು: ನಗರದ ಲಾಡ್ಜ್ ಒಂದರಲ್ಲಿ ಎಂಡಿಎಂಎ ಮಾಧಕ ವಸ್ತು ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಒಟ್ಟು 95,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಪ್ರಮೋದ್ ಎಮ್.ಜಿ., ಮೊಹಮ್ಮದ್ ರಾಶೀದ್, ದರ್ಶನ್ ಎಸ್. ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಪಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್ ಬಳಿಯಲ್ಲಿ ಈ ಮೂವರು ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು 3 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.




