obituaryState News

ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ನಿಧನ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ(DB Chandregowda) ಸೋಮವಾರ ರಾತ್ರಿ ನಿಧನರಾಗಿದ್ದು, ಅವರಿಗೆ 87 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ(ನವೆಂಬರ್ 08) ನಾಳೆ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.ಮೂರು ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡ, ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಕಾನೂನು ಸಚಿವರು ಹಾಗೂ ಸ್ಪೀಕರ್​ ಆಗಿ ಕಾರ್ಯನಿರ್ವಹಿಸಿದ್ದರು. ಇನ್ನು ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ, ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು. ಬಳಿಕ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button