Madikeri

ಚದುರಂಗ ಸ್ಪರ್ಧೆ: ಕಾಪ್ಸ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಗೋಣಿಕೊಪ್ಪಲು, ನ.11: ಜಿಲ್ಲಾ ಮಟ್ಟದ ಚದುರಂಗ ಪಂದ್ಯಾವಳಿಯಲ್ಲಿ ವಿಜಯ ಸಾಧಿಸಿರುವ ಗೋಣಿಕೊಪ್ಪಲಿನ ಕೂರ್ಗ್ ಪಬ್ಲಿಕ್ ಪದವಿ ಪೂರ್ವ ಕಾಲೇಜಿನ (ಕಾಪ್ಸ್) ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಕೊಡಗು ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಮಾದಾಪುರದ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮಾದಾಪುರದಲ್ಲಿ ಇತ್ತೀಚಿಗೆ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಕೂರ್ಗ್ ಪಬ್ಲಿಕ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರೇಮಚಂದ್ರ ಸಾಗರ್, ಮನಸ್ವಿ ಪೊನ್ನಣ್ಣ ಮತ್ತು ಮಾನ್ಯ ಕಾವೇರಮ್ಮ ತಂಡ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ವಿದ್ಯಾರ್ಥಿಗಳ ತಂಡ ಮುಂದೆ ಚಾಮರಾಜನಗರದಲ್ಲಿ ನಡೆಯುವ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ಚದುರಂಗ ಸ್ಪರ್ಧೆಯಲ್ಲಿ ಕೊಡಗು ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಪ್ಸ್ ಪ್ರಾಂಶುಪಾಲರಾದ ಡಾ. ಎಂ.ರಾಮಚಂದ್ರನ್ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button