Crime

ಗಾಂಧಿ ಜಯಂತಿ ಪ್ರಯುಕ್ತ ಮಾಂಸ ಮಾರಾಟ ನಿಷೇಧ

ಕಲಬುರಗಿ,ಸೆ.30:- 2020ರ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಇರುವ ಪ್ರಯುಕ್ತ ಸದರಿ ದಿನದಂದು ಕಲಬುರಗಿ ನಗರದಲ್ಲಿರುವ ಎಲ್ಲ ಕಸಾಯಿ ಖಾನೆ ಮತ್ತು ಮಾಂಸ ಮಾರಾಟ ಮಾಡುವ ಅಂಗಡಿಗಳಲ್ಲಿ ಯಾವುದೇ ರೀತಿಯ ಪ್ರಾಣಿ ವಧೆ ಅಥವಾ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಒಂದು ವೇಳೆ ಕಸಾಯಿ ಖಾನೆ ಹಾಗೂ ಮಾಂಸ ಮಾಡುವ ಅಂಗಡಿಗಳ ಮಾಲೀಕರು ಈ ಆದೇಶ ಉಲ್ಲಂಘಿಸಿದಲ್ಲಿ ಕೆ.ಎಂ.ಸಿ. ಕಾಯ್ದೆ 1976ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾದ ಸ್ನೇಹಲ್ ಸುಧಾಕರ ಲೋಖಂಡೆ ಅವರು ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button