Featured StoryUdupi

ನೇಜಾರು ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆ ಪೂರ್ಣ – ಇಂದು ಅಂತ್ಯ ಸಂಸ್ಕಾರ

ನೇಜಾರು: ರವಿವಾರ ಬೆಳಿಗ್ಗೆ ನಡೆದ ನಾಲ್ವರ ಹತ್ಯಾ ಪ್ರಕರಣದಲ್ಲಿ ಮೃತಪಟ್ಟ ನಾಲ್ವರ ಮೃತದೇಹಗಳ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು ಇಂದು ಕೋಡಿಬೆಂಗ್ರೆ ಜಾಮೀಯಾ ಮಸೀದಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ಮಾಹಿತಿಯ ಪ್ರಕಾರ ನೇಜಾರಿನ ಮನೆಯಲ್ಲಿ ಅಂತಿಮ‌ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಪೊಲೀಸರು ಆರೋಪಿಯ ಪತ್ತೆಗೆ ಜಾಲಾ ಹೂಡಿದ್ದು ಶೀಘ್ರದಲ್ಲಿ ಬಂಧಿಸುವ ಸಾಧ್ಯತೆ ಇದೆ. ಹಲವು ಆಯಾಮಗಳಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ.

ಈ ಕ್ರೂರ ಕೃತ್ಯವನ್ನು ಖಂಡಿಸಿ ಹಲವು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು ಆರೋಪಿಯನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button