Udupi

ದುಷ್ಕರ್ಮಿಯಿಂದ ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮೃತ ಹಸೀನಾ ಅವರ ಅತ್ತೆ ಆಸ್ಪತ್ರೆಯಿಂದ ಬಿಡುಗಡೆ

ಉಡುಪಿ, ನ.13: ನೇಜಾರಿನಲ್ಲಿ ತಾಯಿ ಮಕ್ಕಳ ಹತ್ಯೆ ಸಂದರ್ಭ ದುಷ್ಕರ್ಮಿಯಿಂದ ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮೃತ ಹಸೀನಾ ಅವರ ಅತ್ತೆ ಹಾಜಿರಾ(70) ಇಂದು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.

ಹೊಟ್ಟೆಯ ಎಡಭಾಗಕ್ಕೆ ಇರಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಹಾಜಿರಾ ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚೇತರಿಸಿಕೊಂಡಿರುವ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿದ್ದಾರೆಂದು ತಿಳಿದುಬಂದಿದೆ.

ನಾಲ್ವರನ್ನು ಹತ್ಯೆಗೈದ ಹಂತಕನಿಂದ ಚೂರಿ ಇರಿತಕ್ಕೆ ಒಳಗಾಗಿದ್ದ ಹಾಜಿರಾ ಬಳಿಕ ತಪ್ಪಿಸಿಕೊಂಡು ಶೌಚಾಲಯದೊಳಗೆ ತೆರಳಿ ಬಾಗಿಲು ಹಾಕಿಕೊಂಡಿದ್ದರು. ಪ್ರಕರಣ ಬೆಳಕಿಗೆ ಬಂದ ನಂತರ ಆಗಮಿಸಿದ ಪೊಲೀಸರು ಶೌಚಾಲಾಯದ ಬಾಗಿಲು ಮುರಿದು ಹಾಜಿರಾರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button