
Bengaluru UrbanFeatured Story
ಬಳ್ಳಾರಿ ಬಿಜೆಪಿ ಎಂಪಿ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ: ದೂರು ದಾಖಲಿಸಿದ ಯುವತಿ
ಬೆಂಗಳೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿಯೋರ್ವಳು ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ದೂರು ದಾಖಲಿಸಿದ್ದಾರೆ.ಈ ಸಂಬಂಧ ಪೊಲೀಸರು ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದಾರೆ.
ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಯುವತಿ ಬಸವನಗುಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.ಒಂದೂವರೆ ವರ್ಷದ ಹಿಂದೆ ಯುವತಿಯನ್ನು ಪರಿಚಯ ಮಾಡಿಕೊಂಡು ಹೋಟೆಲ್ ವೊಂದರಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ದೂರು ನೀಡಿದ್ದಾರೆ.




