
Featured StoryUdupi
ನೇಜಾರು ಕೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ಕೃತ್ಯಕ್ಕೆ ಬಳಸಿದ್ದ ಚೂರಿ ವಶ
ಉಡುಪಿ, ನ.18: ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯಿಂದ ಕೃತ್ಯಕ್ಕೆ ಬಳಸಿದ್ದ ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಡುಪಿ ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಪ್ರಕರಣದ ತನಿಖೆ ಮುಂದುವರೆದಿದ್ದು, ಶುಕ್ರವಾರ ಮತ್ತು ಶನಿವಾರ ಆತನ ಮನೆಯಿಂದ ಕೃತ್ಯಕ್ಕೆ ಬಳಸಿದ ಚೂರಿ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ಮಾಹಿತಿಯನ್ನು ತನಿಖೆ ಸಂಪೂರ್ಣಗೊಂಡ ಬಳಿಕ ನೀಡಲಾಗುವುದು ಎಂದು ಅವರು ಹೇಳಿದರು




